ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಭದ್ರಾವತಿ ತಾಲೂಕಿನ ಲಕ್ಕಿನಕೊಪ್ಪ ಸುತ್ತಮುತ್ತ ಕಾಡಾನೆಗಳ ಉಪಟಳ

ಭದ್ರಾವತಿ ತಾಲೂಕಿನ ಲಕ್ಕಿನಕೊಪ್ಪ ಸುತ್ತಮುತ್ತ ಕಾಡಾನೆಗಳ ಉಪಟಳ

 


ಭದ್ರಾವತಿ: ತಾಲೂಕಿನ ಲಕ್ಕಿನಕೊಪ್ಪ ಸುತ್ತಮುತ್ತ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು, ಕಾಡಂಚಿನಲ್ಲಿ ವಾಸಿಸುವ ಜನರು ಭಯದಿಂದ ದಿನ ಕಳೆಯುವಂತಾಗಿದೆ. ಮೊನ್ನೆ ಅಂದರೆ ಕಳೆದ  ಗುರುವಾರ ಗೋಣಿಬೀಡಿನಲ್ಲಿ ನಾಲ್ಕು ಕಾಡಾನೆಗಳು ಕಾಣಿಸಿಕೊಂಡಿತ್ತು. ರೋಡಿನ ಅಂಚಿಗೆ ಬಂದಿದ್ದ ಕಾಡಾನೆಗಳನ್ನು ಜನರೇ ಅರಣ್ಯ ಸಿಬ್ಬಂದಿಯ ಪಟಾಕಿ ಸಿಡಿಸಿ ಹಿಮ್ಮೆಟ್ಟಿಸಿದ್ದರು.  


ಆದರೆ ಕಾಡಿಗೆ ವಾಪಸ್ ತೆರಳದ ಕಾಡಾನೆಗಳು ಪುನಃ ನಿನ್ನೆ ರಾತ್ರಿ ಲಕ್ಕಿನ ಕೊಪ್ಪ ಗ್ರಾಮದ ಅರುಣಾ ಎಂಬವರ ತೋಟಕ್ಕೆ ನುಗ್ಗಿವೆ. ಒಟ್ಟು ನಾಲ್ಕು ಎಕೆರೆ ಪ್ರದೇಶದಲ್ಲಿ ಬೆಳೆದಿದ್ದ ಅಡಿಕೆ, ಬಾಳೆ, ಪೇರಲೆ, ಮಾವು, ಹಲಸನ್ನು ನಾಶ ಪಡಿಸಿವೆ. 

ಭದ್ರಾ ಅಭಯಾರಣ್ಯದಿಂದ ಮಾರಿದಿಬ್ಬ ಉಂಬ್ಳೆಬೈಲು,  ರ್ನಾಳು ಮೂಲಕ ಲಕ್ಕಿನಕೊಪ್ಪ, ಕಾಚಿನಕಟ್ಟೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ವ್ಯಾಪಕ ತೊಂದರೆ ನೀಡುತ್ತಿವೆ. ಈ ಕೆಲದಿನಗಳ ಹಿಂದೆ ಅರಣ್ಯಾಧಿಕಾರಿಗಳು, ಸಕ್ರೆಬೈಲ್ನ ಆನೆಗಳನ್ನು ತಂದು, ಕಾಡಾನೆಗಳನ್ನು ರ್ನಾಳ್ ಮೂಲಕ ಭದ್ರಾ ಅಭಯಾರಣ್ಯಕ್ಕೆ ಅಟ್ಟಿದ್ದರು.  


ಬಳಿಕ ಆ ಆನೆಗಳು ಮತ್ತೆ ರೈತರಿಗೆ ತೊಂದರೆ ನೀಡಲಾರವು, ವಾಪಸ್ ಇದೆ ದಾರಿಯಲ್ಲಿ ಬರಲಾರವು ಎಂದು ವನ್ಯಜೀವಿ ತಜ್ಞರು ತಿಳಿಸಿದ್ದರು. ಆದರೆ ಕೆಲವೇ ದಿನಗಳಲ್ಲಿ ಕಾಡಾನೆಗಳು ಮತ್ತೆ ಈ ಭಾಗದ ಸುತ್ತಮುತ್ತ ಕಾಣಿಸಿಕೊಂಡು ಉಪಟಳ ನಿಡಲು ಆರಂಭಿಸಿವೆ. ಈಗಾಗಲೇ ಸುಮಾರು ನೂರು ಎಕೆರೆಗೂ ಅಧಿಕ ಪ್ರದೇಶದಲ್ಲಿ ಬೆಳೆಗಳನ್ನು ಹಾಳು ಮಾಡಿರುವ ಕಾಡಾನೆಗಳು, ದಿನಕ್ಕೊಬ್ಬರ ತೋಟಕ್ಕೆ ನುಗ್ಗಿ ಭರ್ಜರಿ ಭೋಜನ ನಡೆಸುತ್ತಿವೆ.  

ಕಳೆದ ಮೂರು ತಿಂಗಳಿನಿಂದಲೂ ಈ ಭಾಗದಲ್ಲಿ ವಿಪರೀತ ತೊಂದರೆ ನೀಡುತ್ತಿರುವ ಕಾಡಾನೆಗಳ ಬಗ್ಗೆ, ಅರಣ್ಯ ಇಲಾಖೆ ದಿಟ್ಟ ಕ್ರಮವನ್ನು ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿರುವ ಸ್ಥಳೀಯರು ನಮ್ಮನ್ನೇ ಸಮಾಧಾನ ಮಾಡುವ ಕೆಲಸವನ್ನು ಮಾಡುತ್ತಿರುವ ಅರಣ್ಯ ಇಲಾಖೆ ಕಾಡಾನೆಗಳ ವಿಚಾರದಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದಿದ್ದಾರೆ.

ರೈತರ ಬೆಳೆ ನಾಶವಾದರೆ ನಾವೇನು ಮಾಡುವುದಕ್ಕೆ ಆಗುತ್ತೆ, ಕಾಡಂಚಲ್ಲಿ ಹೊಲ ತೋಟ ಮಾಡಿರುವುದು ನೀವು, ಈಗ ತೊಂದರೆ ಅನುಭವಿಸಬೇಕಾದವರು ಸಹ ನೀವೇ ಎನ್ನುವಂತಹ ಮಾತುಗಳು ಸಿಬ್ಬಂದಿಗಳ ಬಾಯಲ್ಲಿ ಬರುತ್ತಿವೆ ಎಂದು ಆರೋಪಿಸಿದ್ದಾರೆ.


ಇನ್ನು ಅರಣ್ಯ ಇಲಾಖೆಯ ಹೆಸರನ್ನು ಹೇಳಲು ಇಚ್ಚಿಸಿದ ಸಿಬ್ಬಂದಿಯೊಬ್ಬರ ಪ್ರಕಾರ, ಕಾಡಂಚಿನಲ್ಲಿ ಕಾಡಾನೆಗಳು ಬರದಂತೆ ಟ್ರಂಚ್ ನಿರ್ಮಿಸಲಾಗಿದೆ. ಈ ಟ್ರಂಚ್ ಹಾಕುವ ಮೊದಲೇ ಕಾಡಾನೆಗಳು ಈ ಭಾಗಕ್ಕೆ ಬಂದಿದ್ದು, ಈಗ ಅವುಗಳಿಗೆ ವಾಪಸ್ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.  


ಇತ್ತ ಕಾಡಿನಿಂದ ಬಂದು ಉಪಟಳ ನೀಡುತ್ತಿರುವ ಕಾಡಾನೆಗಳು ಎಷ್ಟಿವೆ ಎನ್ನುವುದು ಸಹ ಅಸ್ಪಷ್ಟವಾಗಿದ್ದು, ಗ್ರಾಮಸ್ಥರು ನಾಲ್ಕು ಕಾಡಾನೆಗಳು ಇವೆ ಎಂದರೆ, ಅರಣ್ಯ ಸಿಬ್ಬಂದಿ ಕೇವಲ 2 ಆನೆಗಳಿವೆ ಎನ್ನುತ್ತಿದ್ದಾರೆ. ಇದೇನೆ ಇದ್ದರೂ ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸುವುದರಿಂದ ಏನೂ ಪ್ರಯೋಜನವಾಗುತ್ತಿಲ್ಲ.  


ಅವುಗಳು ಮತ್ತೆ ಬಂದು ತೊಂದರೆ ನೀಡುತ್ತವೆ. ವ್ಯರ್ಥ ಅರಣ್ಯ ಇಲಾಖೆಯ ಖರ್ಚಿಗೆ ಬದಲಾಗಿ, ಆನೆಗಳನ್ನು ಹಿಡಿದು ಅವುಗಳನ್ನು ಸಕ್ರೆಬೈಲ್ ಬಿಡಾರಕ್ಕೆ ಕಳುಹಿಸಿ, ಈ ಮೂಲಕ ಕಾಡಾನೆಗಳ ಕಾಟದಿಂದ ಮುಕ್ತಿ ನೀಡಿ ಎಂದು ಲಕ್ಕಿನಕೊಪ್ಪ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಮನವಿ ಮಾಡುತ್ತಿದ್ದಾರೆ.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم