ಬೆಂಗಳೂರು: ರಾಜ್ಯಾದ್ಯಂತ ಮಳೆಯ ಆರ್ಭಟ ಜೋರಾಗಿದ್ದು, ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಮತ್ತು ಬಯಲು ಸೀಮೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಭಾರೀ ಮಳೆಗೆ ನದಿ, ಹಳ್ಳಕೊಳ್ಳಗಳು, ಕೆರೆಗಳು ತುಂಬಿ ಹರಿಯುತ್ತಿವೆ. ಹೊಲಗದ್ದೆಗಳು ಜಲಾವೃತಗೊಂಡಿದೆ. ರಸ್ತೆ, ಸೇತುವೆಗಳು ಕೊಚ್ಚಿ ಹೋಗಿ, ಸಂಚಾರ ಅಸ್ತವ್ಯಸ್ತಗೊಂಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮತ್ತು ಹಾಸನದಲ್ಲಿ ಮುಂದಿನ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق