ಚಿತ್ರದುರ್ಗ; ವಿಷಯುಕ್ತ ಆಹಾರ ಸೇವಿಸಿ ಒಂದೇ ಕುಟುಂಬದ ಮೂರು ಜನರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ಚಿತ್ರದುರ್ಗದಲ್ಲಿ ಸಂಭವಿಸಿದೆ.
ಚಿತ್ರದುರ್ಗ ತಾಲೂಕಿನ ಇಸಾಮುದ್ರ ಗ್ರಾಮದ ನಿವಾಸಿಗಳಾದ ತಿಪ್ಪಾನಾಯ್ಕ್, ಪತ್ನಿ ಸುಧಾಬಾಯಿ, 75 ವರ್ಷದ ವೃದ್ಧೆ ಗುಂಡಿಬಾಯಿ ಮೃತಪಟ್ಟಿದ್ದು, ರಾಹುಲ್ (18) ಮತ್ತು ರಮ್ಯಾ (16) ತೀವ್ರ ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ ರಾತ್ರಿ ರಾಗಿ ಮುದ್ದೆ, ಕಾಳಿನ ಸಾಂಬರ್ ಸೇವಿಸಿದ್ದ ಐದು ಮಂದಿ ಅಸ್ವಸ್ಥಗೊಂಡಿದ್ದು, ಕೂಡಲೇ 5 ಮಂದಿಯನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೂವರು ಮೃತಪಟ್ಟರೆ, ಇಬ್ಬರು ಚಿಂತಾಜನಕ ಸ್ಥಿತಿಯಲ್ಲಿದ್ದು ಅವರನ್ನು ದಾವಣಗೆರೆ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.
ಈ ಬಗ್ಗೆ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment