ಪುತ್ತೂರು: 2021 ನೇ ಸಾಲಿನ ಏಮ್ಸ್ ಪಿಜಿ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ದೀಕ್ಷಾ ಡಿ.ಎಸ್ ಅಖಿಲ ಭಾರತ ಮಟ್ಟದಲ್ಲಿ 8ನೇ ರ‍್ಯಾಂಕ್ ಗಳಿಸಿದ್ದಾಳೆ. ಈಕೆ ತಿಂಗಳಾಡಿಯ ಸಮೀಪ ವಾಸವಿರುವ ಶ್ಯಾಮ್ ಪ್ರಸಾದ್ ಡಿ ಮತ್ತು ಜಯಶ್ರೀ ಎಸ್ ಪ್ರಸಾದ್ ದಂಪತಿಗಳ ಪುತ್ರಿ.
ತನ್ನ ಪಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಚೆನೈಯ ಮಹರ್ಷಿ ವಿದ್ಯಾ ಮಂದಿರದಲ್ಲಿ ಪೂರೈಸಿ ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪಡೆದು ಬಳಿಕ ಮೈಸೂರಿನ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಯಸ್ ಪದವಿಯನ್ನು ಪಡೆದಿರುತ್ತಾಳೆ. ದೀಕ್ಷಾಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ, ಸಂಚಾಲಕ ಸಂತೋಷ್ ಬಿ, ಪ್ರಾಂಶುಪಾಲ ಮಹೇಶ ನಿಟಿಲಾಪುರ, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಶುಭ ಹಾರೈಸಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment