ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಡೆತ್ ನೋಟ್ ಬರೆದು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಗೆ ಶರಣು

ಡೆತ್ ನೋಟ್ ಬರೆದು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಗೆ ಶರಣು

 


ಸಾಗರ : ಡೆತ್ ನೋಟ್ ಬರೆದು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಸಾಗರ ತಾಲೂಕಿನ ಕೆಳದಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ವೇಳೆಗೆ ನಡೆದಿದೆ.


ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕೆಳದಿ ಗ್ರಾಮದ ಸುಬ್ರಹ್ಮಣ್ಯ ಎಂಬವರ ಪುತ್ರ ಗಣೇಶ್ (22) ವರ್ಷದವ ಆತ್ಮಹತ್ಯೆಗೆ ಶರಣಾದ ಯುವಕ.


ಗಣೇಶ್ ಉಡುಪಿಯಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದು, ಲಾಕ್ ಡೌನ್ ನಿಂದ ಕಾಲೇಜು ರಜೆ ಇದ್ದ ಕಾರಣ ತನ್ನ ಮನೆಗೆ ಹೋಗಿದ್ದನು.


ಗಣೇಶ್ ನಿನ್ನೆ ಮಧ್ಯಾಹ್ನ ತನ್ನ ಮನೆಯಲ್ಲಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಸಾವಿಗೆ ತಾನೇ ಜವಾಬ್ದಾರಿ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾನೆ.


ಸುಬ್ರಹ್ಮಣ್ಯ ಅವರಿಗೆ ಐದು ಜನ ಹೆಣ್ಣುಮಕ್ಕಳು ಇದ್ದು ಗಣೇಶ ಕೊನೆಯ ಪುತ್ರನಾಗಿದ್ದ. ಇಂಜಿನಿಯರಿಂಗ್ ಓದುತ್ತಿದ್ದ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ಈ ಬಗ್ಗೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post