ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ರಾಜಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಧಾನಸೌಧದಿಂದ ನೇರವಾಗಿ ತೆರಳಿ ರಾಜೀನಾಮೆ ನೀಡುತ್ತೇನೆ ಎಂದು ಬಿಎಸ್ವೈ ಹೇಳಿದ್ದಾರೆ.
ರಾಜೀನಾಮೆ ನೀಡುವುದಾಗಿ ಘೋಷಿಸುವ ವೇಳೆ ಯಡಿಯೂರಪ್ಪ ರವರು ಭಾವುಕರಾಗಿದ್ದಾರೆ. ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸುತ್ತೇನೆ ಎಂದು ತಿಳಿಸಿದ ಅವರು, ದುಃಖದಿಂದ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿಲ್ಲ.
ಸಂತೋಷದಿಂದ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿರುವೆ ಎಂದು ಹೇಳಿದ್ದಾರೆ.
75 ವರ್ಷ ಮೀರಿದ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ಆದರೆ, ನನ್ನ ಮೇಲೆ ಪ್ರೀತಿ ವಿಶ್ವಾಸ ಇಟ್ಟು ನನಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಮುಂದೆ ಬರುವ ದಿನಗಳಲ್ಲಿ ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆ ಬರುವ ಅವಕಾಶ ಸಿಗಬೇಕು ಎಂದು ದೇವರಲ್ಲಿ ಈ ಬಗ್ಗೆ ನಾನು ಪ್ರಾರ್ಥನೆ ಮಾಡುತ್ತೇನೆ ಎಂದು ಯಡಿಯೂರಪ್ಪ ರವರು ಹೇಳಿದ್ದಾರೆ.
ತಮ್ಮ ಸುದೀರ್ಘ ರಾಜಕೀಯ ಇತಿಹಾಸವನ್ನು ಮೆಲುಕು ಹಾಕಿದ ಯಡಿಯೂರಪ್ಪ, ಇಂದು ಸೋಮವಾರ ಮಧ್ಯಾಹ್ನ ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಪದವಿಗೆ ರಾಜಿನಾಮೆ ನೀಡುವುದಾಗಿ ಘೋಷಿಸಿದ್ದಾರೆ.
Post a Comment