ಬೆಂಗಳೂರು: ರಾಜ್ಯದ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿದ್ದು ಮುಂದಿನ ಸಿಎಂ ಯಾರು ಎಂಬ ಪ್ರಶ್ನೆಗೆ ಇದೀಗ ತೆರೆಬಿದ್ದಿದ್ದು, ಬಸವರಾಜ್ ಬೊಮ್ಮಾಯಿ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.
ಧರ್ಮೇಂದ್ರ ಪ್ರಧಾನ್ ನೇತೃತ್ವದಲ್ಲಿ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಿಜೆಪಿ ಹೈಕಮಾಂಡ್ ಬಸವರಾಜ್ ಬೊಮ್ಮಾಯಿ ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದ್ದಾರೆ.
ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ನಾಳೆ ಮಧ್ಯಾಹ್ನ 1.20ಕ್ಕೆ ಬಸವರಾಜ್ ಬೊಮ್ಮಾಯಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق