ಬೆಳ್ತಂಗಡಿ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು ಇದರಿಂದ ಮನನೊಂದ ಪತಿ, ಆಕೆಯ ಅಂತ್ಯಸಂಸ್ಕಾರಕ್ಕೆ ಹಾಕಿದ್ದ ಶಾಮಿಯಾನದ ಕಂಬಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ಮುಡಿಪಿರೆ ಎಂಬಲ್ಲಿ ನಡೆದಿದೆ.
ಚಂದ್ರಾವತಿ (49) ವರ್ಷ ಅವರು ಮನೆಯ ಪಕ್ಕದ ಗೇರುಮರಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮರುದಿನ ಅವರ ಪತಿ ಶಿವಪ್ಪ ಗೌಡ (56) ವರ್ಷ ಎಂಬವರೂ ಇದೇ ಕೃತ್ಯವೆಸಗಿದ್ದಾರೆ.
ಪತಿಗೆ ಅತಿಯಾದ ಕುಡಿತದ ಚಟ ಇದ್ದು, ಪತಿಗೆ ವಾಸಿಯಾಗದ ದೀರ್ಘ ಕಾಲದ ಅಸೌಖ್ಯ ಮತ್ತು ಮಕ್ಕಳಾಗದೆ ಇರುವ ಕೊರತೆ ಯಿಂದ ಮಾನಸಿಕವಾಗಿ ನೊಂದಿದ್ದ ಚಂದ್ರಾವತಿ ಜೀವನದಲ್ಲಿ ಜಿಗುಪ್ಸೆ ಹುಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.
ದಂಪತಿ ತಾಯಿ ನಾಗಮ್ಮರೊಂದಿಗೆ ವಾಸ್ತವ್ಯವಿದ್ದರು. ಇದೀಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದು, ತಾಯಿ ಒಬ್ಬಂಟಿಯಾಗಿದ್ದಾರೆ.
ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment