ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಿಕ್ಕಮಗಳೂರು: ರಸ್ತೆ ಅಪಘಾತದಲ್ಲಿ ಇಬ್ಬರು ಸಾವು

ಚಿಕ್ಕಮಗಳೂರು: ರಸ್ತೆ ಅಪಘಾತದಲ್ಲಿ ಇಬ್ಬರು ಸಾವು

 



ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರೈತ ಸಂಘದ ಇಬ್ಬರು ಮುಖಂಡರು ಚಿಕ್ಕಮಗಳೂರಿನ ರಾಮನಹಳ್ಳಿ ಹತ್ತಿರ ಗುರುವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.


ರಾಜ್ಯ ರೈತ ಸಂಘದ ಮುಖಂಡರಾದ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಅರೇಹಳ್ಳಿಯ ರಾಮಸ್ವಾಮಿ (72) ವರ್ಷ ಸ್ಥಳದಲ್ಲೇ ಮೃತಪಟ್ಟಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ, ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಎಚ್‌.ಮೊಗೇನಹಳ್ಳಿ ಗ್ರಾಮದ ಎಂ.ರಾಮು (65) ವರ್ಷ ಅವರು ಆಸ್ಪತ್ರೆಗೆ ಕರೆದೊಯ್ಯುವ ವೇಳೆಯಲ್ಲಿ ಮೃತಪಟ್ಟಿದ್ದಾರೆ.


ಧಾರವಾಡ ಜಿಲ್ಲೆಯ‌ ನವಲಗುಂದದಲ್ಲಿ ನಡೆದ ರೈತ ಹುತಾತ್ಮ‌ ದಿನಾಚರಣೆಯಲ್ಲಿ‌ ಪಾಲ್ಗೊಂಡು ಹಾಸನ ಜಿಲ್ಲೆಯ‌ ಬೇಲೂರಿಗೆ ಬರುತ್ತಿದ್ದ ವೇಳೆಯಲ್ಲಿ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

0 تعليقات

إرسال تعليق

Post a Comment (0)

أحدث أقدم