ಚಿಕ್ಕಮಗಳೂರು: ಕುಡಿದ ಅಮಲಿನಲ್ಲಿ ಕಾರು ಚಾಲಕನೋರ್ವ ಕಾರು ಚಲಾಯಿಸಿ ಸರಣಿ ಅಪಘಾತ ನಡೆಸಿದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೃಷ್ಣಾಪುರ ಬಳಿ ರವಿವಾರ ಸಂಭವಿಸಿದೆ.
ವೋಕ್ಸ್ ವೇಗನ್ ಪೋಲೋ ಕಾರು ಚಾಲಕನೋರ್ವ ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿಕೊಂಡು ಹೋದ ಪರಿಣಾಮ ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗದ ಚಕ್ರ ಕಳಚಿ ಬಿದ್ದಿದ್ದು, ಈ ವೇಳೆ ಕಾರಿನ ಏರ್ ಬ್ಯಾಗ್ ಓಪನ್ ಆದ ಕಾರಣ ಚಾಲಕನ ಜೀವ ಉಳಿದಿದೆ.
ಈ ಘಟನೆ ಬಗ್ಗೆ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Post a Comment