ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂಗಳೂರು; ಕೋವಿಡ್ ಸೋಂಕಿಗೆ ತಂದೆ ತಾಯಿ ಸಾವು

ಮಂಗಳೂರು; ಕೋವಿಡ್ ಸೋಂಕಿಗೆ ತಂದೆ ತಾಯಿ ಸಾವು

 




ಮಂಗಳೂರು : ಕೋವಿಡ್ ಸೋಂಕು ತಗುಲಿದ ಹಿನ್ನೆಲೆ ಕಳೆದ 12 ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಒಂದೇ ದಿನ ಸಾವನ್ನಪ್ಪಿದ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. 


ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೈಂಟ್ ಮೇರಿಸ್ ಚರ್ಚ್‌ನ ಧರ್ಮಗುರು ಸೆಬಾಸ್ಟಿಯನ್ ಪುನ್ನತ್ತಾನತ್ತ್ ಅವರ ತಾಯಿ ಮೇರಿ ಪುನ್ನತ್ತಾನತ್ತ್ ಮತ್ತು ಅವರ ತಂದೆ ವರ್ಗೀಸ್ ಪುನ್ನತ್ತಾನತ್ತ್ ಮೃತ ದಂಪತಿ.


 ಇವರು ನಿನ್ನೆ ಮೂರುವರೆ ಗಂಟೆ ಅಂತರದಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ದಂಪತಿಗಳನ್ನು ಜುಲೈ 4 ರಂದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 


ದಾಂಪತ್ಯ ಜೀವನದುದ್ದಕ್ಕೂ ಪರಸ್ಪರ ಅನ್ಯೋನ್ಯವಾಗಿದ್ದ ಇವರು ಸಾವಿನಲ್ಲೂ ಒಂದಾಗಿರುವುದು ವಿಶೇಷ. 


ಮೃತರು ಓರ್ವ ಧರ್ಮಗುರುಸಹಿತ ಇಬ್ಬರು ಗಂಡು ಮತ್ತು ಇಬ್ಬರು‌ ಹೆಣ್ಣು ಮಕ್ಕಳನ್ನು ಅಗಲಿದ್ದಾರೆ



0 تعليقات

إرسال تعليق

Post a Comment (0)

أحدث أقدم