ಬೆಂಗಳೂರು : ಕೋವಿಡ್ ಸೋಂಕಿತರೂ ಕೂಡ ಸಿಇಟಿ ಪರೀಕ್ಷೆ ಬರೆಯುವುದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ಮಾಡಿಕೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವ, ಡಿಸಿಎಂ ಡಾ.ಸಿ.ಎಸ್. ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ಕೋವಿಡ್ ಹಿನ್ನೆಲೆ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಲಾಗಿದೆ. ಎಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯಲು ಸಿಇಟಿ ಪರೀಕ್ಷೆಯಲ್ಲಿ ಗಳಿಸುವ ಅಂಕಗಳೇ ಅಂತಿಮವಾಗಿರುವುದರಿಂದ ವಿದ್ಯಾರ್ಥಿಗಳು ಸಿಇಟಿ ಯತ್ತ ಗಮನಹರಿಸಬೇಕು ಎಂದು ಹೇಳಿದ್ದಾರೆ.
ಹಾಗೆ ಕೋವಿಡ್ ಸೋಂಕಿತರೂ ಕೂಡ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದ್ದು, ಯಾರೂ ಕೋವಿಡ್ ಸೋಂಕಿನಿಂದ ಇದ್ದರೋ ಅಂಥವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗುವುದು.
ಅಷ್ಟು ಮಾತ್ರವಲ್ಲದೆ ಸೋಂಕಿನ ತೀವ್ರತೆಯನ್ನು ಆಧರಿಸಿ ಅಂಥವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗುತ್ತದೆ.
ಸಂಪೂರ್ಣ ಕೋವಿಡ್ ಸುರಕ್ಷತೆಯೊಂದಿಗೆ ಸಿಇಟಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಅಶ್ವತ್ಥ್ ನಾರಾಯಣ ಮಾಹಿತಿ ನೀಡಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق