ಪುತ್ತೂರು: ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲಾ ವ್ಯಕ್ತಿಗಳು ಲಸಿಕೆ ಹಾಕಬೇಕೆಂಬುದು ಉದ್ದೇಶ, ಆದ್ದರಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಆಸ್ಪತ್ರೆಗೆ ಹೋಗಲು ಅನಾನುಕೂಲ ಆಗುವ ಉದ್ದೇಶದಿಂದ ವಿದ್ಯಾಸಂಸ್ಥೆಯಲ್ಲಿ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ವ್ಯಾಕ್ಸಿನ್ ತೆಗೆದುಕೊಂಡ ನಂತರ ಕೂಡ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಅಗತ್ಯ ಎಂದು ಪುತ್ತೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ದೀಪಕ್ ರೈ ಹೇಳಿದರು.
ಅವರು ಇಲ್ಲಿನ ವಿವೇಕಾನಂದ ಕಾಲೇಜು ಪುತ್ತೂರು ಮತ್ತು ತಾಲೂಕು ಆರೋಗ್ಯ ಇಲಾಖೆ ಇವುಗಳ ಸಹಕಾರದಲ್ಲಿ ಆಯೋಜಿಸಲಾದ 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಅಭಿಯಾನ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಬುಧವಾರ ಮಾತನಾಡಿದರು.
ಕಾರ್ಯಕ್ರಮಕ್ಕೆ ಪುತ್ತೂರು ನಗರ ಸಭೆಯ ಅಧ್ಯಕ್ಷರು ಜೀವಂಧರ್ ಜೈನ್ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಮಾತನಾಡಿ ಶುಭಹಾರೈಸಿದರು.
ಈ ಸಂದರ್ಭ ವೇದಿಕೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸದಸ್ಯ ಅಬ್ದುಲ್ ರಜಾಕ್ ಉಪಸ್ಥಿತರಿದ್ದರು. ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ಕಾರ್ಯಕ್ರಮ ನಿರ್ವಹಿಸಿದರು.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق