ಶಿವಮೊಗ್ಗ : ಪೊಲೀಸ್ ಕಾರ್ಯಾಚರಣೆ ವೇಳೆಯಲ್ಲಿ ನಕಲಿ ಕೊಬ್ಬರಿ ಎಣ್ಣೆ ಮಾರಾಟ ಜಾಲವೊಂದು ಶಿವಮೊಗ್ಗದಲ್ಲಿ ಪತ್ತೆಯಾಗಿದೆ. 24 ಬಾಟಲಿ ನಕಲಿ ಕೊಬ್ಬರಿ ಎಣ್ಣೆ ವಶ ಪಡಿಸಲಾಗಿದೆ.
ನಕಲಿ ಕೊಬ್ಬರಿ ಎಣ್ಣೆ ಮಾರಾಟ ಜಾಲದ ಮಳಿಗೆಗಳ ಮೇಲೆ ಶಿವಮೊಗ್ಗ ಡಿವೈಎಸ್ಪಿ ಪ್ರಶಾಂತ ಮುನ್ನೊಳಿ ಮತ್ತು ಕೋಟೆ ಠಾಣೆ ಪೊಲೀಸರ ತಂಡದ ನೇತೃತ್ವದಲ್ಲಿಂದು ದಾಳಿ ನಡೆದಿದ್ದು ಈ ಸಮಯದಲ್ಲಿ ಭಾರಿ ಅಕ್ರಮ ನಡೆಯುತ್ತಿರುವುದು ತಿಳಿದು ಬಂದಿದೆ.
ಶಿವಮೊಗ್ಗದ ಗಾಂಧಿಬಜಾರ್ ಕುಚಲಕ್ಕಿ ಕೇರಿ ಅಂಗಡಿ ಮೇಲೆ ಪೊಲೀಸರು ದಾಳಿ ಮಾಡಿದ್ದು, ನಕಲಿ ಕೊಬ್ಬರಿ ಎಣ್ಣೆಯ 24 ಬಾಟಲ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಪ್ರತಿಷ್ಠಿತ ಕಂಪನಿಯ ಕೊಬ್ಬರಿ ಎಣ್ಣೆ ಬಾಟಲಿಗೆ ಹೋಲಿಕೆಯಾಗುತ್ತಿರುವ ನಕಲಿ ಕೊಬ್ಬರಿ ಎಣ್ಣೆ ಬಾಟಲಿಗಳನ್ನು ಮಾರಾಟ ಮಾಡುತ್ತಿರುವುದು ಖಚಿತವಾಗಿದೆ.
ನಗರದ ಹಲವು ಅಂಗಡಿಗಳಿಗೆ ಪ್ರತಿಷ್ಠಿತ ಕಂಪನಿ ಹೆಸರಿನಲ್ಲಿ ನಕಲಿ ಕೊಬ್ಬರಿ ಎಣ್ಣೆ ಮಾರಾಟ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ.
ಈ ಬಗ್ಗೆ ಕೋಟೆ ಪೊಲೀಸ್ ಠಾಣೆಯಲ್ಲಿ ಅಕ್ರಮ ನಡೆಸುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment