ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂಗಳೂರು; ಆಂಬುಲೆನ್ಸ್ ಗೆ ದಾರಿ ಬಿಟ್ಟು ಕೊಡದ ಕಾರು ಚಾಲಕನ ವಿರುದ್ಧ ಕೇಸ್

ಮಂಗಳೂರು; ಆಂಬುಲೆನ್ಸ್ ಗೆ ದಾರಿ ಬಿಟ್ಟು ಕೊಡದ ಕಾರು ಚಾಲಕನ ವಿರುದ್ಧ ಕೇಸ್

 


ಮಂಗಳೂರು: ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ರೋಗಿಯನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಆಂಬುಲೆನ್ಸ್​ಗೆ ದಾರಿ ಬಿಟ್ಟು ಕೊಡದ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ‌ ಪೊಲೀಸರು, ಕಾರ ನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.


ಸೋಮವಾರ ಸಂಜೆ ದೇರಳಕಟ್ಟೆ ಕಣಚೂರು ಆಸ್ಪತ್ರೆಯಿಂದ ಮಂಗಳೂರಿನ ಆಸ್ಪತ್ರೆಗೆ ತುರ್ತುಚಿಕಿತ್ಸೆಗಾಗಿ ರೋಗಿಯನ್ನು ಆಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಗಿತ್ತು.




ಈ ಸಂದರ್ಭದಲ್ಲಿ ಆಂಬುಲೆನ್ಸ್ ಗೆ ರಸ್ತೆಯಲ್ಲಿ ದಾರಿ ಬಿಡದೆ ಅಮಾನೀಯವಾಗಿ ವರ್ತಿಸಿ ಕಾರು ಚಾಲಕ ತೊಂದರೆ ನೀಡಿದ್ದಾನೆ.


ರಸ್ತೆಯಲ್ಲಿ ಇತರ ವಾಹನಗಳು ಬದಿಗೆ ಸರಿದು ಆಂಬುಲೆನ್ಸ್‌ಗೆ ದಾರಿ ಮಾಡಿ ಕೊಡುತ್ತಿದ್ದರೂ, ಕಾರಿನ ಚಾಲಕ ಅಡ್ಡಾದಿಡ್ದಿಯಾಗಿ ಚಲಿಸಿ, ಆಂಬುಲೆನ್ಸ್ ನ ಮುಂದೆ ಮತ್ತಷ್ಟು ವೇಗವಾಗಿ ಸಾಗಿದ್ದಾನೆ.


ಇದೆಲ್ಲವೂ ಆಂಬುಲೆನ್ಸ್‌ನಲ್ಲಿ ಇದ್ದವರು ಚಿತ್ರೀಕರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಕೆಲವರು ಕಾರು ಚಾಲಕನ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.


ಮಂಗಳವಾರ ದಂದು ದಕ್ಷಿಣ ಸಂಚಾರ ಠಾಣೆ ಪೊಲೀಸರು, ಕಾರು ಸಮೇತ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

0 Comments

Post a Comment

Post a Comment (0)

Previous Post Next Post