ಮಂಗಳೂರು: ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ರೋಗಿಯನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಆಂಬುಲೆನ್ಸ್‌ಗೆ ದಾರಿ ಬಿಟ್ಟು ಕೊಡದ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕಾರ ನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.
ಸೋಮವಾರ ಸಂಜೆ ದೇರಳಕಟ್ಟೆ ಕಣಚೂರು ಆಸ್ಪತ್ರೆಯಿಂದ ಮಂಗಳೂರಿನ ಆಸ್ಪತ್ರೆಗೆ ತುರ್ತುಚಿಕಿತ್ಸೆಗಾಗಿ ರೋಗಿಯನ್ನು ಆಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಗಿತ್ತು.
ಈ ಸಂದರ್ಭದಲ್ಲಿ ಆಂಬುಲೆನ್ಸ್ ಗೆ ರಸ್ತೆಯಲ್ಲಿ ದಾರಿ ಬಿಡದೆ ಅಮಾನೀಯವಾಗಿ ವರ್ತಿಸಿ ಕಾರು ಚಾಲಕ ತೊಂದರೆ ನೀಡಿದ್ದಾನೆ.
ರಸ್ತೆಯಲ್ಲಿ ಇತರ ವಾಹನಗಳು ಬದಿಗೆ ಸರಿದು ಆಂಬುಲೆನ್ಸ್‌ಗೆ ದಾರಿ ಮಾಡಿ ಕೊಡುತ್ತಿದ್ದರೂ, ಕಾರಿನ ಚಾಲಕ ಅಡ್ಡಾದಿಡ್ದಿಯಾಗಿ ಚಲಿಸಿ, ಆಂಬುಲೆನ್ಸ್ ನ ಮುಂದೆ ಮತ್ತಷ್ಟು ವೇಗವಾಗಿ ಸಾಗಿದ್ದಾನೆ.
ಇದೆಲ್ಲವೂ ಆಂಬುಲೆನ್ಸ್‌ನಲ್ಲಿ ಇದ್ದವರು ಚಿತ್ರೀಕರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಕೆಲವರು ಕಾರು ಚಾಲಕನ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.
ಮಂಗಳವಾರ ದಂದು ದಕ್ಷಿಣ ಸಂಚಾರ ಠಾಣೆ ಪೊಲೀಸರು, ಕಾರು ಸಮೇತ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
إرسال تعليق