ಲಕ್ನೋ : ಹರ್ಯಾಣದ ಗುರುಗ್ರಾಮದ ಮೆದಂತಾ ಆಸ್ಪತ್ರೆಯಲ್ಲಿ ದೀರ್ಘಕಾಲದ ಅನಾರೋಗ್ಯದಿಂದಾಗಿ ಸಂತ ಕಬೀರ್‌ನಗರದ ಮಾಜಿ ಬಿಜೆಪಿ ಸಂಸದ ಶರದ್ ತ್ರಿಪಾಠಿ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಯಕೃತ್ತು ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ತ್ರಿಪಾಠಿ (49 ವರ್ಷ) ಇವರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ತ್ರಿಪಾಠಿ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಇಬ್ಬರು ಗಂಡು ಮಕ್ಕಳಿದ್ದಾರೆ.
Post a Comment