ಶಿಮ್ಲಾ: ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರಸಿಂಗ್ (87 ವರ್ಷ) ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು, ಗುರುವಾರ ಮುಂಜಾನೆ ವೇಳೆ ನಿಧನರಾಗಿದ್ದಾರೆ.
ವೀರಭದ್ರಸಿಂಗ್ ಇಂದಿರಾಗಾಂಧಿ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿತಿ ತುಂಬಾ ಹದಗೆಟ್ಟಿತ್ತು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಹಿಮಾಚಲಪ್ರದೇಶದಲ್ಲಿ ಆರು ಬಾರಿ ಮುಖ್ಯಮಂತ್ರಿಯಾಗಿ ವೀರಭದ್ರ ಸಿಂಗ್ ಸೇವೆ ಸಲ್ಲಿಸಿದ್ದರು. ಅವರು 9 ಬಾರಿ ಶಾಸಕ, ಐದು ಬಾರಿ ಸಂಸದರಾಗಿದ್ದರು.
إرسال تعليق