ಶಾಸಕ ಡಾ.ಭರತ್ ಶೆಟ್ಟಿ ಅಧ್ಯಕ್ಷತೆ
ಮಂಗಳೂರು: ಕೃಷಿ ಮಾರುಕಟ್ಟೆ ಹಾಗೂ ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಹಣ್ಣು ಮತ್ತು ತರಕಾರಿ ಮಾರಾಟದ ಆಧುನಿಕ ಮಾರುಕಟ್ಟೆ ನಿರ್ಮಾಣಕ್ಕೆ ಇವತ್ತು ಶಿಲಾನ್ಯಾಸ ನೆರವೇರಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಘನ ಉಪಸ್ಥಿತಿ ವಹಿಸಿದ್ದರು.
ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಶಾಸಕರುಗಳಾದ ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳೂರು ಎಪಿಎಂಸಿ ಅಧ್ಯಕ್ಷ ಕೆ. ಕೃಷ್ಣರಾಜ ಹೆಗ್ಡೆ, ಉಪಾಧ್ಯಕ್ಷ ರಜನಿ ದಗ್ಗಣ್ಣ, ಕಾರ್ಯದರ್ಶಿ ಸಿ.ಎಚ್. ಮೋಹನ್, ಎಪಿಎಂಸಿ ಆಡಳಿತ ಮಂಡಳಿ ಸಮಿತಿಯ ಸದಸ್ಯರು ಸೇರಿದಂತೆ ಗಣ್ಯರು ಭಾಗವಹಿಸಿದ್ದರು.
Key Words: APMC, Fruits and Vegetable market, Baikampady APMC yard, ಎಪಿಎಂಸಿ, ಹಣ್ಣು ಮತ್ತು ತರಕಾರಿ ಮಾರುಕಟ್ಟೆ
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
إرسال تعليق