ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ಮತ್ತು ಭಾರತೀಯ ಜನತಾ ಪಾರ್ಟಿ ಎ.ಸ್ ಸಿ ಮೋರ್ಚಾ ಮಂಗಳೂರು ಉತ್ತರ ಮಂಡಲ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉಡುಪಿ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಅಂಬೇಡ್ಕರ್ ರವರ 130 ವರ್ಷದ ಜಯಂತಿ ಪ್ರಯುಕ್ತ 18ನೇ ವಾರ್ಡ್ ನ ದ.ಕ.ಜಿ.ಪಂ. ಉನ್ನತೀಕರಿಸಿದ ಮುಲ್ಲಕಾಡಿನ ಶಾಲೆಯಲ್ಲಿ ಶಾಸಕರಾದ ಡಾ. ವೈ.ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಉಚಿತ ಕನ್ನಡಕ ಬುಧವಾರ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸುಮಾರು 74 ಜನರು ಉಚಿತ ಕನ್ನಡಕ ಪಡೆದುಕೊಂಡು 11 ಜನರು ಉಚಿತ ಶಸ್ತ್ರಚಿಕಿತ್ಸೆಯ ಸದುಪಯೋಗ ಪಡೆದುಕೊಂಡರು.
ಬಿಜೆಪಿ ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಮಂಡಲ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಉಪಮೇಯರ್ ಸುಮಂಗಳ ರಾವ್, ಮ.ನ.ಪಾ ಸದಸ್ಯರಾದ ಗಾಯತ್ರಿ ರಾವ್, ಮನೋಜ್ ಕುಮಾರ್ ಕೋಡಿಕಲ್, ರಂಜಿನಿ ಕೋಟ್ಯಾನ್, ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಆನಂದ ಪಾಂಗಾಳ, ಮಂಡಲ ಪದಾಧಿಕಾರಿಗಳು, ಕಾವೂರು 2 ರ ಮಹಾಶಕ್ತಿ ಕೇಂದ್ರ ಪದಾಧಿಕಾರಿಗಳು, ವಾರ್ಡ್18ರ ಬೂತ್ ನ ಅಧ್ಯಕ್ಷರು, ಕಾರ್ಯಕರ್ತರು, ಪ್ರಸಾದ್ ನೇತ್ರಾಲಯದ ಪ್ರಮುಖರು ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
Post a Comment