ಕಾಸರಗೋಡು: ಕೆಎಸ್ ಆರ್ ಟಿಸಿ ಬಸ್ಸು ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಕುಂಬಳೆ ನಿವಾಸಿಯೋರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಸೋಮವಾರ ರಾತ್ರಿ ಕಾಞಂಗಾಡ್ ನಲ್ಲಿ ನಡೆದಿದೆ.
ಗಂಭೀರ ಗಾಯ ಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತ ರಾತ್ರಿ.8.30 ಯ ಸುಮಾರಿಗೆ ಕಾಞಂಗಾಡ್ ಸೌತ್ ನಲ್ಲಿ ನಡೆದಿದೆ.
ಮೃತಪಟ್ಟವರನ್ನು ಕುಂಬಳೆ ಆರಿಕ್ಕಾಡಿಯ ಅಲಿ ( 32) ವರ್ಷ ಗುರುತಿಸಲಾಗಿದೆ. ಗಂಭೀರ ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇಬ್ಬರೂ ಕಾರು ಪ್ರಯಾಣಿಕರಾಗಿದ್ದಾರೆ.
ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ಸು ಪ್ರಯಾಣಿಕರಾದ ಐವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment