ಕಟಪಾಡಿ : ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆಯೊಂದು ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ಬಳಿ ನಡೆದಿದೆ.
ಕಟಪಾಡಿ ಅಚ್ಚಡ ನಿವಾಸಿ ಯಶೋಧರ ಆಚಾರ್ಯ ಮೃತ ಬೈಕ್ ಸವಾರ ಎಂದು ತಿಳಿದು ಬಂದಿದೆ.
ಇವರನ್ನು ಅಪಘಾತ ವಾದ ಸ್ಥಳ ದಿಂದ ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಮೃತ ಯಶೋಧರ ಆಚಾರ್ಯ ಅವರು ಪತ್ನಿ ಹಾಗೂ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment