ಕಲಬುರಗಿ: ಕೋವಿಡ್ ನಿಂದ ಮುಂದೂಡಿದ್ದ ಗುಲಬರ್ಗಾ ವಿಶ್ವವಿದ್ಯಾಲಯದ ಬಿಎ, ಬಿಎಸ್ಸಿ, ಬಿಕಾಂ ಹಾಗೂ ಸ್ನಾತಕೋತ್ತರ ಪದವಿ ಸೇರಿ ಇನ್ನೂ ಪದವಿ ಕೋರ್ಸ್ ಗಳ ಮೊದಲನೇ, ಮೂರನೇ ಹಾಗೂ ಐದನೇ ಸೆಮಿಸ್ಟರ್ ಪರೀಕ್ಷೆಗಳನ್ನು ಇದೇ ಆಗಸ್ಟ್ 2 ರಿಂದ ನಡೆಸಲಾಗುತ್ತದೆ.
ಗುಲ್ಬರ್ಗಾ ವಿವಿಯ ಕುಲಪತಿ ಪ್ರೊ. ದಯಾನಂದ ಅಗಸರ್ ಮಾಹಿತಿ ನೀಡಿದ್ದು, ಉನ್ನತ ಶಿಕ್ಷಣ ಪರಿಷತ್ ಹಾಗೂ ಯುಜಿಸಿಯ ಮಾರ್ಗಸೂಚಿಗಳ ಅನ್ವಯ ಪರೀಕ್ಷೆ ನಡೆಸಲಾಗುತ್ತಿದೆ.
4 ಜಿಲ್ಲೆಗಳ ಸುಮಾರು 150 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1 ಲಕ್ಷ 20 ಸಾವಿರ ಪದವಿ ಹಾಗೂ 12 ಸಾವಿರ ಸ್ನಾತಕೋತ್ತರ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಲಿದ್ದಾರೆ ಎಂದು ಅವರು ತಿಳಿಸಿದರು.
ಮೊದಲನೇ, ಮೂರನೇ ಹಾಗೂ ಐದನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಆಧರಿಸಿ 2 ಹಾಗೂ 4ನೇ ಸೆಮಿಸ್ಟರ್ ಪದವಿ ವಿದ್ಯಾರ್ಥಿಗಳನ್ನು ಹಾಗೂ 2 ನೇ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಪ್ರಮೋಟ್ ಮಾಡಲಾಗುವುದರ ಮೂಲಕ ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು.
ಹಾಗೆ 6 ನೇ ಸೆಮಿಸ್ಟರ್ ಪದವಿ ವಿದ್ಯಾರ್ಥಿಗಳಿಗೆ ಹಾಗೂ 4 ನೇ ಸೆಮಿಸ್ಟರ್ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು.
Post a Comment