ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಜೋರಾಗಿದ್ದು, ಜುಲೈ 26 ರವರೆಗ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಉತ್ತರ, ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರಿನಲ್ಲಿ ಜುಲೈ 23 ರಂದು ಆರೆಂಜ್ ಅಲರ್ಟ್ ಹಾಗೂ ಜುಲೈ 24, 25 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Post a Comment