ಬೆಂಗಳೂರು: ಗೃಹ ಸಚಿವ ಬಸವರಾಜ ಬೊಮ್ಮಾಯಿಯವರ ಮನೆಯ ಮುದ್ದಿನ ನಾಯಿ ಸಾವಿಗೀಡಾದ ಕಾರಣ ಗೃಹ ಸಚಿವರು ಬೇಸರಗೊಂಡಿದ್ದಾರೆ. ಸಾಕು ನಾಯಿ ʻಸನ್ನಿʼ ವಯೋಸಹಜವಾಗಿ ಸೋಮವಾರ ಬೆಳಿಗ್ಗೆ ಮೃತಪಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ʻಇಂದು ನಮ್ಮ ಮನೆಯ ಮುದ್ದಿನ ನಾಯಿ ʻಸನ್ನಿʼ ವಯೋಸಹಜದಿಂದ ಸಾವನ್ನಪ್ಪಿರುವುದು ತೀವ್ರ ದುಃಖ ತಂದಿದ್ದು ಕುಟುಂಬದ ಓರ್ವ ಸದಸ್ಯನನ್ನು ಕಳೆದುಕೊಂಡಂತಾಗಿದೆ. ಮನೆಯ ಹಾಗೂ ಮನೆಗೆ ಬರುವ ಎಲ್ಲರೊಂದಿಗೆ ಅತ್ಯಂತ ಪ್ರೀತಿಯಿಂದ ಬೆರೆಯುತ್ತಿತ್ತುʼ ಎಂದು ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
Post a Comment