ಮಂಗಳೂರು : ಇನ್ನು ಮುಂದೆ ಚುನಾವಣೆಗಳಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆ ಸ್ಥಾನವನ್ನು ಯುವಕರಿಗೆ ಬಿಟ್ಟುಕೊಡುತ್ತೇನೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶ ಉಳಿಯಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್ ಉಳಿಯಬೇಕಾದರೆ ಯುವಕರಿಗೆ ಹೆಚ್ಚು ಅವಕಾಶ ನೀಡಬೇಕು.
ಆಗ ಮತದಾರರಿಗೂ ಸ್ಫೂರ್ತಿ ಬರುತ್ತದೆ. ರಾಜಕಾರಣದಲ್ಲಿ ಈ ಬದಲಾವಣೆಯ ಅಗತ್ಯವಿದೆ. ಎಲ್ಲ ಹಿರಿಯರಿಗೆ ಇದೇ ಕಿವಿಮಾತು ಹೇಳುತ್ತಿದ್ದೇನೆ ಎಂದರು.
Post a Comment