ರಾಯಚೂರು: ಬೆಂಗಳೂರಿನ ಇನ್‌ಫೋಸಿಸ್ ಬಿ.ಪಿ.ಎಮ್. ಸಂಸ್ಥೆಯ ವತಿಯಿಂದ ಮೈಸೂರು, ಚೆನ್ನೈ, ಹೈದರಾಬಾದ್ ಮತ್ತು ಪುಣೆ ನಗರಗಳ ಬಿ.ಪಿ.ಓ. ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ವಿಕಲಚೇತನ ಪದವೀಧರ ನಿರುದ್ಯೋಗಿ ಅಭ್ಯರ್ಥಿಗಳಿಂದ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿಕಲಚೇತನ ಪದವೀಧರರು ಇತ್ತೀಚೆಗೆ ಪದವಿ ಪಡೆದಿರುವ ಅಥವಾ 2 ವರ್ಷಗಳ ಅನುಭವ ಹೊಂದಿರುವ ಮೂಳೆ ವೈಕಲ್ಯ, ಕುಬ್ಜ ಹಾಗೂ ಆಸಿಡ್ ದಾಳಿಯಿಂದ ಪಾರಾದ ವಿಕಲಚೇತನ ಅಭ್ಯರ್ಥಿಗಳು ಈ ನೇಮಕಾತಿ ಭಾಗವಹಿಸಲು ಅರ್ಹರಿರುತ್ತಾರೆ.
ಉತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯ, ಉತ್ತಮ ವಿಶ್ಲೇಷಣಾತ್ಮಕ ಮತ್ತು ತಾರ್ಕಿಕ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿಗಳು 3 ರಿಂದ 4 ಹಂತದ ಆನ್‌ಲೈನ್ ಪರೀಕ್ಷೆಗಳ ಮೂಲಕ ನೇಮಕಾತಿ ಡ್ರೈವ್‌ನಲ್ಲಿ ಪಾಲ್ಗೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9986938368, 8073610442 ಗೆ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
إرسال تعليق