ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಆನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದು, ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚಿನ ಜಾಗರೂಕತೆಯನ್ನು ಅನುಸರಿಸುವ ಅನಿವಾರ್ಯವಿದ್ದು, ಮುಂಬರುವ ದಿನಗಳಲ್ಲಿ ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಪ್ರಸ್ತುತ ರಾಜ್ಯ ಸರ್ಕಾರವು ಕೇರಳ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ, ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ಸಂಖ್ಯೆಯಲ್ಲಿ ದಿನನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚಾರ ಮಾಡುತ್ತಿದ್ದು, ಕಾಸರಗೋಡು - ಮಂಗಳೂರು ನಡುವಿನ ಬಸ್ ಸಂಚಾರಕ್ಕೆ ಜುಲೈ 19ರಿಂದ ಈ ಕೆಳಕಂಡ ಷರತ್ತಿಗೊಳಪಟ್ಟು ಅನುಮತಿ ನೀಡಲಾಗಿದೆ.
1) ಕೆ.ಎಸ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್ ಗಳ ಮೂಲಕ ಪ್ರಯಾಣಿಸುವವರು ಕೋವಿಡ್ ಲಸಿಕೆ ಕನಿಷ್ಠ 1 (ಒಂದು) ಡೋಸ್ ಪಡೆದಿರುವ ಅಥವಾ 72 ಗಂಟೆಗಳ ಒಳಗೆ ಮಾಡಿಸಿರುವ RT-PCR ಪರೀಕ್ಷೆಯ ನಗೆಟಿವ್ ವರದಿಯನ್ನು ಆಯಾ ಬಸ್ ನ ನಿರ್ವಾಹಕರು (Bus Conductor) ಖಚಿತಪಡಿಸಕೊಳ್ಳತಕ್ಕದ್ದು,
2) .ಕೋವಿಡ್ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸುವುದು. (ಮುಖ ಗವಸು, ಸ್ಯಾನಿಫರ್, ಸಾರ್ವಜನಿಕ ಅಂತರ)
ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ-2020, ವಿಪತ್ತು ನಿರ್ವಹಣಾ ಕಾಯ್ದೆ, 2005 ರಡಿ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Key Words: Mangalore-Kasaragod Bus, KSRTC, Dakshina Kannada, ಕೆಎಸ್ಸಾರ್ಟಿಸಿ, ಮಂಗಳೂರು-ಕಾಸರಗೋಡು ಬಸ್,
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
Post a Comment