ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಐವರ್ನಾಡು; ಸೇವಾಭಾರತಿ ವತಿಯಿಂದ ಕಾರ್ಮಿಕರಿಗೆ ಕಿಟ್ ವಿತರಣೆ

ಐವರ್ನಾಡು; ಸೇವಾಭಾರತಿ ವತಿಯಿಂದ ಕಾರ್ಮಿಕರಿಗೆ ಕಿಟ್ ವಿತರಣೆ

 


ಸುಳ್ಯ; ಕಾರ್ಮಿಕ ಇಲಾಖೆಯಿಂದ ವಿತರಣೆ ಮಾಡಿದ ಕಿಟ್ ನ್ನು ಸೇವಾ ಭಾರತಿ ಮತ್ತು ಸಚಿವರ ವಾರ್ ರೂಂ, ಬಿ.ಜೆ.ಪಿ. ಐವರ್ನಾಡು ಇದರ ಸಹಯೋಗದ ಮೂಲಕ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ ಕಾರ್ಯಕ್ರಮವು ಜು.4 ರಂದು ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾಭವನದಲ್ಲಿ ನಡೆಯಿತು.


ಒಟ್ಟು 46 ಮಂದಿ ಕಾರ್ಮಿಕರಿಗೆ ಕಿಟ್ ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರ ಭಾರತಿಯ ಅಧ್ಯಕ್ಷ ಮತ್ತು ಕ್ಯಾಂಪ್ಕೋ ನಿರ್ದೇಶಕ ಕೃಷ್ಣ ಪ್ರಸಾದ್ ಮಡ್ತಿಲ, ದ.ಕ ಜಿಲ್ಲಾ ಜೇನು ವ್ಯವಸಾಯಗಾರರ ಸಹಕಾರ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಎ ಪಿ ಎಂ ಸಿ ಉಪಾಧ್ಯಕ್ಷ ನವೀನ್ ಕುಮಾರ್ ಸಾರಕರೆ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಸದಸ್ಯ ಕಿಶನ್ ಜಬಳೆ, ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಮಡ್ತಿಲ, ಐವರ್ನಾಡು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ನವೀನ್ ಚಾತುಬಾಯಿ, ರಾಜೀವಿ ಲಾವಂತಡ್ಕ, ರಾಜೀವಿ ಪರ್ಲಿಕಜೆ, ರೇವತಿ ಬೋಳುಗುಡ್ಡೆ ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post