ಮಂಗಳೂರು: ಅಸಂಘಟಿತ ಪುರೋಹಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ದ.ಕ ಹಾಗೂ ಉಡುಪಿ ಜಿಲ್ಲಾ ಘಟಕ ಪಣಂಬೂರಿನ ನಂದನೇಶ್ವರ ದೇವಸ್ಥಾನದ ಆವರಣದಲ್ಲಿ ಭಾನುವಾರ ಉದ್ಘಾಟನೆಗೊಂಡಿದ್ದು, ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಭೇಟಿ ನೀಡಿ ಸಂಘಟನೆಯ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿ ಸಂಘಟನೆಯ ಧ್ಯೇಯೋದ್ದೇಶಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಉಪಮೇಯರ್ ಸುಮಂಗಲಾ, ಸಂಘದ ಅಧ್ಯಕ್ಷ ಪ್ರಕಾಶ್ ಹೊಳ್ಳ, ಉಪಾಧ್ಯಕ್ಷ ಸುಭಾಷ್ ಪರಾಂಜಪೆ, ಗೌರವಾಧ್ಯಕ್ಷ ರಘುರಾಮ ರಾವ್ ಕೆ., ಸುಬ್ರಹ್ಮಣ್ಯ ಮಯ್ಯ, ಸೂರ್ಯ ನಾರಾಯಣ್ ಐತಾಳ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
إرسال تعليق