ಮಂಗಳೂರು: ಇಲ್ಲಿನ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕನಿಂದ ₹20.89 ಲಕ್ಷ ಮೌಲ್ಯದ ಚಿನ್ನವನ್ನು ಶುಕ್ರವಾರ ದಂದು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದ ಕಾಸರಗೋಡಿನ ಪ್ರಯಾಣಿಕನನ್ನು ತಪಾಸಣೆಗೆ ಒಳಪಡಿಸ ಲಾಗಿತ್ತು.
ಈ ವೇಳೆಯಲ್ಲಿ ಆರೋಪಿಯು 430 ಗ್ರಾಂ ತೂಕದ ಚಿನ್ನವನ್ನು ಪೌಡರ್ ಮಾಡಿಕೊಂಡು, ಗಮ್‌ನೊಂದಿಗೆ ಸೇರಿಸಿ, ಗುದನಾಳದಲ್ಲಿ ಇಟ್ಟು ಸಾಗಣೆ ಮಾಡು ತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಸ್ಟಮ್ಸ್ ಉಪ ಆಯುಕ್ತ ಪ್ರವೀಣ್ ಕಂಡಿ, ಅಧಿಕಾರಿಗಳಾದ ರಾಕೇಶ್‌ಕುಮಾರ್, ವಿಕಾಸ್‌ಕುಮಾರ್, ಬಿಕ್ರಮ್ ಚಕ್ರವರ್ತಿ ಕಾರ್ಯಾಚರಣೆ ನಡೆಸಿದ್ದಾರೆ.
إرسال تعليق