ಮಂಗಳೂರು : ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿರುವ ಕಾರಣ ಇಂದಿನಿಂದ ಒಂದು ವಾರ ಕಾಲ ಮಂಗಳೂರು-ಕಾಸರಗೋಡು ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ಮಂಗಳೂರಿನಿಂದ ಕಾಸರಗೋಡಿಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್ ಗಳನ್ನು ಆಗಸ್ಟ್ 1 ರಿಂದ ಒಂದು ವಾರ ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಸಭೆ ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಗಸ್ಟ್ 10ರವರೆಗೆ ನಡೆಸದಂತೆ ಕ್ರಮ ಕೈಗೊಳ್ಳಬೇಕು. ಮದುವೆ ಕಾರ್ಯಕ್ರಮಗಳಿಗೆ ಕೇವಲ 50 ಜನರು ಮಾತ್ರ ಸೀಮಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ
إرسال تعليق