ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಿಪಿಎಲ್‌ ಕಾರ್ಡ್‌ ತಪ್ಪು ಸರಿಪಡಿಸಲು ಸಚಿವರಿಗೆ ಮನವಿ

ಬಿಪಿಎಲ್‌ ಕಾರ್ಡ್‌ ತಪ್ಪು ಸರಿಪಡಿಸಲು ಸಚಿವರಿಗೆ ಮನವಿ



ಮಂಗಳೂರು: ನೈಜ ಬಿಪಿಎಲ್ ಕಾರ್ಡುದಾರರು ಸೌಲಭ್ಯಗಳಿಂದ ವಂಚಿತರಾದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರ ಜೊತೆ ಶಾಸಕ ಡಾ.ಭರತ್ ಶೆಟ್ಟಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.


ಆದಾಯ ಪ್ರಮಾಣಪತ್ರ ತಿದ್ದುಪಡಿ ಮಾಡುವ ಸಮಯದಲ್ಲಿ ಕೆಲವೊಂದು ತಾಂತ್ರಿಕ ಸಮಸ್ಯೆಗಳಿಂದ ನೈಜ ಬಿಪಿಎಲ್ ಪಡಿತರ ಕಾರ್ಡುಗಳು ಎಪಿಎಲ್ ಆಗಿ ಜನಸಾಮಾನ್ಯರು ಸರಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದು, ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಈ ವಿಷಯವನ್ನು ಈ ಹಿಂದಿನ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದರು. ಆಗ ಆಹಾರ ಇಲಾಖೆಯ ಆಯುಕ್ತರಿಂದ ಅದನ್ನು ಸರಿಪಡಿಸುವ ಭರವಸೆ ಸಿಕ್ಕಿತ್ತು.


ಜನರ ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಫಾಲೋ ಅಪ್ ಮಾಡುತ್ತಾ ಬಂದಿರುವ ಶಾಸಕ ಡಾ.ಭರತ್ ಶೆಟ್ಟಿಯವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ  ಪಡಿತರ ಕಾರ್ಡುಗಳ ಸಮಸ್ಯೆಗೆ ಸಂಬಂಧಪಟ್ಟ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಲು ಮನವಿ ಮಾಡಿದರು.


ಇದನ್ನು ಶೀಘ್ರವಾಗಿ ಪರಿಹರಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ‌. ಸಭೆಯಲ್ಲಿ ಶಾಸಕರುಗಳಾದ ಉಮಾನಾಥ್ ಕೋಟ್ಯಾನ್, ರಾಜೇಶ್ ನಾಯ್ಕ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post