ಹಾಸನ: ಈಗಾಗಲೇ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಇದೀಗ ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 75 ಕುಸಿತಗೊಂಡಿದೆ.
ಸಕಲೇಶಪುರದ ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು ಹಾಗೂ ಮಂಗಳೂರು ಸಂಪರ್ಕ ರಸ್ತೆಯಾಗಿದ್ದು, ನಿರಂತರ ಸುರಿದ ಮಳೆಯಿಂದಾಗಿ ರಸ್ತೆ ಕುಸಿತ ಉಂಟಾಗಿದೆ.
ಈಗಾಗಲೇ ಈ ಮಾರ್ಗದಲ್ಲಿ ಘನ ವಾಹನ ಸಂಚಾರ ಬಂದ್ ಆಗಿದ್ದು, ಪ್ರಯಾಣಿಕರು ಪರ್ಯಾಯ ಮಾರ್ಗದ ಕಡೆ ಮುಖ ಮಾಡಿದ್ದಾರೆ.
ಇದೀಗ ಘಟನಾ ಸ್ಥಳದಲ್ಲಿ ರಸ್ತೆ ಸರಿಪಡಿಸುವ ಕಾರ್ಯಾಚರಣೆ ಆರಂಭಗೊಂಡಿದೆ.
إرسال تعليق