ಬೆಂಗಳೂರು: ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆಗೆ ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿಯವರು ಗುರುವಾರ ಭೇಟಿ ನೀಡಿ, ಪರಿಹಾರ ಕಾರ್ಯಗಳ ಕುರಿತು ಪರಿಶೀಲನೆ ನಡೆಸಲಿದ್ದಾರೆ.
ಜು.29ರಂದು ಬೆಳಗ್ಗೆ 9.30ಕ್ಕೆ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹುಬ್ಬಳಿಗೆ ತೆರಳಿರುವ ಮುಖ್ಯಮಂತ್ರಿ, ಅಲ್ಲಿಂದ ರಸ್ತೆ ಮೂಲಕ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಕಾರವಾರ ಮತ್ತು ಅಂಕೋಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಹಾರ ಕ್ರಮಗಳ ಪರಿಶೀಲನೆ ಮತ್ತು ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ.
ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಪರಿಹಾರ ಕಾರ್ಯಗಳ ಕುರಿತಂತೆ ಶಾಸಕರು, ಸಂಸತ್ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಅಂಕೋಲಾದಲ್ಲಿರುವ ನಾಡವರ ಸಭಾ ಭವನದಲ್ಲಿ ಚರ್ಚೆ ನಡೆಸಲಿದ್ದಾರೆ
ನಂತರ, ರಸ್ತೆ ಮೂಲಕ ಅಂಕೋಲಾದಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಸ್ತೆ ಮೂಲಕ ಬಂದು, ವಿಶೇಷ ವಿಮಾನದ ಮೂಲಕ ಸಂಜೆ 7ಕ್ಕೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
إرسال تعليق