ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣಾ ಕ್ಷೇತ್ರಗಳಿಗೆ ಮೀಸಲಾತಿ ಪ್ರಕಟ

ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣಾ ಕ್ಷೇತ್ರಗಳಿಗೆ ಮೀಸಲಾತಿ ಪ್ರಕಟ

 


ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ಕರಡು ಅಧಿಸೂಚನೆ ಪ್ರಕಟಿಸಲಾಗಿದೆ.


ಈ ಹಿಂದೆ ಹೊರಡಿಸಲಾದ ಎಲ್ಲ ಅಧಿಸೂಚನೆ ರದ್ದುಪಡಿಸಿ ಹೊಸ ಕರಡು ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯ ಪತ್ರದಲ್ಲಿ ಗ್ರಾಮಸ್ವರಾಜ್ ಪಂಚಾಯತ್ ರಾಜ್ ನಿಯಮ ಅನ್ವಯ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಸ್ಥಾನಗಳಿಗೆ ಮೀಸಲಾತಿ ಕರಡು ಪ್ರಕಟಿಸಲಾಗಿದೆ. 


ಅಧಿಸೂಚನೆ ಪ್ರಕಟಗೊಂಡ 7 ದಿನಗಳ ಕಾಲಾವಕಾಶದೊಳಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.


ಚುನಾವಣೆ ಆಕ್ಷೇಪಣೆ ಸಲ್ಲಿಸುವುದಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಜುಲೈ 8 ರೊಳಗೆ ಕಾರ್ಯದರ್ಶಿಗಳು, ರಾಜ್ಯ ಚುನಾವಣಾ ಆಯೋಗ ಒಂದನೇ ಮಹಡಿ, ಕೆ.ಎಸ್.ಸಿ.ಎಂ.ಎಫ್. ಕಟ್ಟಡ, ನಂಬರ್ 8, ಕನ್ನಿಂಗ್ ಹ್ಯಾಮ್ ರಸ್ತೆ ಬೆಂಗಳೂರು ಇವರಿಗೆ ತಲುಪುವಂತೆ ಸಲ್ಲಿಸತಕ್ಕದ್ದು.


www.erajyapatra.com ದಲ್ಲಿ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರಗಳ ಅಧಿಸೂಚನೆ ಗಮನಿಸಬಹದು ಎಂದು ಹೇಳಲಾಗಿದೆ.

0 تعليقات

إرسال تعليق

Post a Comment (0)

أحدث أقدم