ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ 'ಆಂತರಿಕ ಗುಣಮಟ್ಟ ಭರವಸೆ ಕೋಶ' ಇದರ ಆಶ್ರದಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಭಾರತೀಯ ಯುವ ರೆಡ್ ಕ್ರಾಸ್ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಸಹಯೋಗದೊಂದಿಗೆ ಮಂಗಳವಾರ (ಜು.27) ಕಾರ್ಗಿಲ್ ವಿಜಯ್ ದಿವಸ್ ದಿನಾಚರಣೆಯನ್ನು ನಡೆಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ 'ನಿವೃತ್ತ ಸುಬೇದಾರ್ ಮೇಜರ್ ಪಿ. ಜಗನ್ನಾಥ ಶೆಟ್ಟಿ'ಯವರು ತಮ್ಮ ಸೇವಾನುಭವಗಳನ್ನು ರಕ್ಷಣಾ ಕಾರ್ಯಾಚರಣೆಗಳ ನೆನಪುಗಳನ್ನು ಆಪರೇಷನ್ ಬ್ಲೂ ಸ್ಟಾರ್" ಕಾರ್ಯಾಚರಣೆಯ ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಬಳಿಕ ಸೈನಿಕ ತರಬೇತಿ, ಭೌತಿಕ ಪರೀಕ್ಷೆಗಳ ಬಗ್ಗೆ ತಿಳಿಸಿದರು.
ಸಭಾಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಭಟ್ ಕುಳಮರ್ವ ಅಧ್ಯಕ್ಷೀಯ ಮಾತುಗಳನ್ನಾಡಿದರು.
ಸ್ಮಿತಾ ಇವರು ಸ್ವಾಗತಿಸಿ ಶಿಲ್ಪಾ ರವರು ಧನ್ಯವಾದವಿತ್ತರು. ಅನನ್ಯ ಕಾರ್ಯಕ್ರಮ ನಿರೂಪಿಸಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق