ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉಡುಪಿ: ಕಾರು ಚರಂಡಿಗೆ ಬಿದ್ದು ಚಾಲಕ ಮೃತ್ಯು

ಉಡುಪಿ: ಕಾರು ಚರಂಡಿಗೆ ಬಿದ್ದು ಚಾಲಕ ಮೃತ್ಯು

 



ಉಡುಪಿ: ಭಾರೀ ಮಳೆಯಿಂದಾಗಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆಯೊಂದು ಉಡುಪಿಯ ಉಚ್ಚಿಲ - ಮುದರಂಗಡಿ ರಸ್ತೆಯ ಎಲ್ಲೂರು ಪೆಜತ್ತಕಟ್ಟೆ ಬಳಿ ಇಂದು ನಡೆದಿದೆ.


ಮೃತರನ್ನು ಕಾಪು‌ ಕೊಪ್ಪಲಂಗಡಿ ನಿವಾಸಿ ರವೀಂದ್ರ ಪೂಜಾರಿ (38) ವರ್ಷ ಎಂದು ಗುರುತಿಸಲಾಗಿದೆ.  ರವಿಂದ್ರ ಪೂಜಾರಿ ಉದ್ಯಾವರ ಬಲಾಯಿಪಾದೆಯಲ್ಲಿ ಗ್ಯಾರೇಜ್ ನಡೆಸುತ್ತಿದ್ದು ನಿನ್ನೆ ಆದಿತ್ಯವಾರ ರಾತ್ರಿ ಎಲ್ಲೂರಿಗೆ ತೆರಳಿದ್ದರು. ಇಂದು ಮುಂಜಾನೆ ವಾಪಸ್ಸಾಗುತ್ತಿರುವ ವೇಳೆ ಅಪಘಾತ ಸಂಭವಿಸಿದೆ.


ಕಾರು ರಸ್ತೆ ಬದಿಯ ಚರಂಡಿ ಮತ್ತು ಮಣ್ಣಿನ‌ ದಿಬ್ಬಕ್ಕೆ ಡಿಕ್ಕಿ ಹೊಡೆದಿದ್ದು, ರವೀಂದ್ರ ಅವರು ಕಾರಿನಿಂದ ಹೊರಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ರಕ್ತಸ್ರಾವ ಉಂಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 


ಮುಂಜಾನೆ ಪೇಪರ್ ಹಾಕುವ ಏಂಜಟರು ಈ ಅಪಘಾತವನ್ನು ಗಮನಿಸಿ, ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ, ಬಳಿಕ ಪಡುಬಿದ್ರಿ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.


ಮೃತರು ತಾಯಿ, ಸಹೋದರರು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.


(ಉಪಯುಕ್ತ ನ್ಯೂಸ್)


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم