ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ; ಎಸ್ಎಸ್ಎಲ್ ಸಿ ವಿದ್ಯಾರ್ಥಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ; ಎಸ್ಎಸ್ಎಲ್ ಸಿ ವಿದ್ಯಾರ್ಥಿ ಸಾವು

 


ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಸಾವಿಗೀಡಾದ ಘಟನೆಯೊಂದು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚಿಕ್ಕನಹಳ್ಳಿ ಬಳಿ ನಡೆದಿದೆ. 


ಚಿಕ್ಕನಹಳ್ಳಿಯಲ್ಲಿ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿ ಮಂಜುನಾಥ್ ಸಾವಿಗೀಡಾದ ದುರ್ದೈವಿ.


ಮನೆಯಿಂದ‌ ಶಾಲೆಗೆ ಹಾಲ್ ಟಿಕೆಟ್ ತರಲು ಹೋದ ಬಾಲಕ. ನಿನ್ನೆ ಮಂಗಳವಾರ ಈ ‌ದುರಂತ ಸಂಭವಿಸಿದೆ. 


ಮಂಜುನಾಥ್ (16)ವರ್ಷ ಹಾಲ್‌ ಟಿಕೆಟ್‌ ತರಲು ಹೋಗಿ ಮೃತಪಟ್ಟ ವಿದ್ಯಾರ್ಥಿ.


 ದಾರಿಯಲ್ಲಿ ಹೋಗುವಾಗ ಟ್ರ್ಯಾಕ್ಟರ್ ಚಾಲಕ ಶಾಲೆ‌ವರೆಗೆ ಬಿಡೋದಾಗಿ ಮಂಜುನಾಥನನ್ನು ತನ್ನ ಟ್ರ್ಯಾಕ್ಟರ್​ನಲ್ಲಿ ಕೂರಿಸಿಕೊಂಡು ಹೋಗಿದ್ದನು.


 ಸ್ವಲ್ಪ ಮುಂದೆ ಸಾಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿ ಆಕಸ್ಮಿಕ ದುರಂತ ನಡೆದಿದೆ.


ಈ ಬಗ್ಗೆ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 تعليقات

إرسال تعليق

Post a Comment (0)

أحدث أقدم