ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಇಲ್ಲದೆ ಪಾಸ್

ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಇಲ್ಲದೆ ಪಾಸ್

 


ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿರುವುದರಿಂದ ಪುನರಾವರ್ತಿತ ವಿದ್ಯಾರ್ಥಿಗಳನ್ನು ಕೂಡ ಪರೀಕ್ಷೆ ಇಲ್ಲದೆ ಪಾಸ್ ಮಾಡಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಹೇಳಲಾಗಿದೆ.


ಫ್ರೆಷರ್ ಗಳನ್ನು ಮಾತ್ರ ಪಾಸ್ ಮಾಡಿ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದ್ದು, ಇದನ್ನು ಪ್ರಶ್ನಿಸಿ ಕೆಲವರು ಕೋರ್ಟ್ ಮೊರೆ ಹೋಗಿದ್ದರು. 


ಈ ಬಗ್ಗೆ ಕೋರ್ಟ್ ಪರಿಶೀಲನೆ ನಡೆಸಲು ಸೂಚನೆ ನೀಡಿದ್ದು, ತಜ್ಞರ ಸಮಿತಿ ಪುನರಾವರ್ತಿತ ವಿದ್ಯಾರ್ಥಿಗಳನ್ನು ಕೂಡ ಪಾಸು ಮಾಡುವಂತೆ ಶಿಫಾರಸು ಮಾಡಿದೆ.  


ಹಾಗೆಯೇ ಪುನರಾವರ್ತಿತ ವಿದ್ಯಾರ್ಥಿಗಳನ್ನು ಕೂಡ ಪರೀಕ್ಷೆ ಇಲ್ಲದೆ ಪಾಸ್ ಮಾಡಲು ಚಿಂತನೆ ನಡೆದಿದ್ದು, ಶೀಘ್ರವೇ ಸರ್ಕಾರದಿಂದ ತೀರ್ಮಾನಿಸಲಾಗುವುದು. 


ಖಾಸಗಿ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎನ್ನಲಾಗಿದೆ.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم