ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಮಾಧ್ಯಮ ಸಲಹೆಗಾರನಾಗಿದ್ದ ಹಿರಿಯ ಪತ್ರಕರ್ತ ಕೆ.ಸಿ.ಸದಾನಂದ ನಿಧನರಾದರು.
ತೀವ್ರ ಹೃದಯಾಘಾತದಿಂದ ಅವರು ಕಳೆದ ರಾತ್ರಿ 12 ಗಂಟೆ ಸುಮಾರಿಗೆ ನಿಧನ ಹೊಂದಿದ್ದು, ಪತ್ನಿ ಮತ್ತು ಪುತ್ರನನ್ನು ಅವರು ಅಗಲಿದ್ದಾರೆ.
ತೀವ್ರ ಹೃದಯಾಘಾತಕ್ಕೀಡಾಗಿದ್ದ ಅವರನ್ನು ಕೂಡಲೇ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ದಾರಿ ಮಧ್ಯೆಯೇ ಮೃತಪಟ್ಟರು.
ಸೋಶಿಯಲ್ ಮೀಡಿಯಾದಲ್ಲಿ ಸದಾ ಕ್ರಿಯಾಶೀಲವಾಗಿದ್ದ ಚನ್ನಪಟ್ಟಣದ ಸದಾನಂದ, ಸಂಜೆವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು.
ಎಚ್.ಡಿ.ಕುಮಾರಸ್ವಾಮಿ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಈಗಲೂ ಕೆಲಸ ಮಾಡುತ್ತಿದ್ದರು. ಬೆಂಗಳೂರು ವರದಿಗಾರರ ಕೂಟದ ಪ್ರಧಾನ ಕಾರ್ಯದರ್ಶಿಯಾಗಿ ಸಹ ಕಾರ್ಯ ನಿರ್ವಹಿಸಿದ್ದರು.
ಕೆ.ಸಿ. ಸದಾನಂದ ಅವರ ನಿಧನಕ್ಕೆ ಬೆಂಗಳೂರು ವರದಿಗಾರರ ಕೂಟದ ಕಾರ್ಯಕಾರಿಣಿ ಸಮಿತಿ ತೀವ್ರ ಸಂತಾಪ ವ್ಯಕ್ತ ಪಡಿಸಿದೆ.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق