ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಇಂದಿನಿಂದ ಕೆಲವು ಸೇವೆಗಳು ಆರಂಭಗೊಳ್ಳಲಿದೆ. ಪ್ರಧಾನ ಸೇವೆಗಳಾದ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ ಮತ್ತು ಮಹಾಭಿಷೇಕವು ಜು.29ರಿಂದ ಪ್ರಾರಂಭವಾಗಲಿದೆ.
ಉಳಿದೆಲ್ಲಾ ಸೇವೆಗಳು ಸರಕಾರದ ಕೋವಿಡ್ ಮಾರ್ಗಸೂಚಿ ಅನುಸಾರವಾಗಿ ಶ್ರೀ ದೇವಾಲಯದಲ್ಲಿ ಸೇವೆಗಳನ್ನು ನೆರವೇರಿಸಲು ಭಕ್ತರಿಗೆ ಅವಕಾಶ ಕಲ್ಪಿಸಿ ಕೊಡಲಾಗಿದೆ.
ಬೆಳಗ್ಗೆ 6.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನಂತರ ಮಧ್ಯಾಹ್ನ 3.30ರಿಂದ ರಾತ್ರಿ 8.30 ಗಂಟೆ ತನಕ ಭಕ್ತರಿಗೆ ಶ್ರೀ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.
ಭಕ್ತರಿಗೆ ಭೋಜನ ಪ್ರಸಾದ ವಿತರಣೆಯೂ ಆರಂಭವಾಗಲಿದ್ದು. ಭಕ್ತರಿಗೆ ಶ್ರೀ ದೇವಳದ ವಸತಿ ಗೃಹಗಳಲ್ಲಿ ನೆಲೆಸಲು ಅವಕಾಶ ಕಲ್ಪಿಸಲಾಗಿದೆ. ದೇವಾಲಯದಲ್ಲಿ ಲಡ್ಡು, ಪಂಚ ಕಜ್ಜಾಯ ಪ್ರಸಾದ, ತೀರ್ಥ ಬಾಟ್ಲಿ ವಿತರಣೆ ಆರಂಭಗೊಳ್ಳಲಿದೆ.
ಜು.29 ರಿಂದ ಸರ್ಪಸಂಸ್ಕಾರ ಆರಂಭ
ಜು.29 ಗುರುವಾರದಿಂದ ಶ್ರೀ ದೇವಳದ ಪ್ರಧಾನ ಸೇವೆಗಳಾದ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ, ಮಹಾಭಿಷೇಕ ಸೇವೆಗಳು ಆರಂಭಗೊಳ್ಳಲಿದೆ.
ಇಂತಹ ಸೇವೆಯನ್ನು ನೆರವೇರಿಸಲು ಸೇವಾರ್ಥಿಗಳು ಕೋವಿಡ್-19 ಪ್ರಥಮ ಡೋಸ್ ಲಸಿಕೆ ಪಡೆದಿರಬೇಕು ಮತ್ತು ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಿದ ವರದಿ ಹಾಜರು ಪಡಿಸಬೇಕು. ಹಾಗೆಯೇ ಕಡ್ಡಾಯವಾಗಿ ಮಾಸ್ಕ್ ಧಾರಣೆ ಮತ್ತು ಸಾಮಾಜಿಕ ಅಂತರ ಪಾಲನೆ ಮಾಡಬೇಕು.
Post a Comment