ಸುಳ್ಯ : ತಾಲೂಕಿನ ಐವರ್ನಾಡು ನಲ್ಲಿ ನೆಲೆಸಿದ್ದು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಸುಳ್ಯ ವಿಭಾಗದ ಫಾರೆಸ್ಟರ್ ಉಮೇಶ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ.
ಕಳೆದ ಶನಿವಾರದಂದು ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಉಮೇಶ್ ಅವರನ್ನು ಸುಳ್ಯ ದ ಆಸ್ಪತ್ರೆ ಗೆ ಕರೆದೊಯ್ದು ಅಲ್ಲಿಂದ ವೈದ್ಯರ ಸಲಹೆಯ ಮೇರೆಗೆ ಮಂಗಳೂರಿಗೆ ಕರೆದೊಯ್ಯಲಾಯಿತು.
ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆ ಗೆ ಕರೆದೊಯ್ದರು ಆದರೆ ಅವರಿಗೆ ಚಿಕಿತ್ಸೆ ಫಲಿಸದೇ ಮೃತಪಟ್ಟರು ಎಂಬ ಮಾಹಿತಿ ತಿಳಿದು ಬಂದಿದೆ.
ಆತ್ಮಹತ್ಯೆ ಗೆ ನಿಖರವಾದ ಮಾಹಿತಿ ದೊರಕಿಲ್ಲ.
Post a Comment