ಚೆನ್ನೈ: ಖ್ಯಾತ ನಟಿ ಯಶಿಕಾ ಆನಂದ್ ಅವರು ಚಲಿಸುತ್ತಿದ್ದ ಕಾರು ಭೀಕರ ಅಪಘಾತ ನಡೆದಿದೆ. ಸ್ನೇಹಿತರ ಜೊತೆ ಮಹಾಬಲಿಪುರಂ ನಿಂದ ಚೆನ್ನೈಗೆ ಪ್ರಯಾಣ ಮಾಡುತ್ತಿದ್ದ ವೇಳೆ ಈ ಕಾರು ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಯಶಿಕಾ ಆನಂದ್ ಅವರಿಗೆ ಗಂಭೀರ ಗಾಯಗಳಾಗಿವೆ. ಅವರ ಜೊತೆ ಪ್ರಯಾಣ ಮಾಡುತ್ತಿದ್ದ ಸ್ನೇಹಿತೆ ವಲ್ಲಿಚೆಟ್ಟಿ ಭವಾನಿ (28) ವರ್ಷ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಯಶಿಕಾ ಆನಂದ್ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಪ್ರಾರ್ಥಿಸುತ್ತಿದ್ದಾರೆ.
ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ನಟಿ ಯಶಿಕಾ ಆನಂದ್ ಫೇಮಸ್ ಆಗಿದ್ದಾರೆ.
ಬಿಗ್ ಬಾಸ್ ಮುಂತಾದ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸಿ ಕೂಡ ಅವರು ಹೆಸರು ಗಳಿಸಿದ್ದರು.
ನಟಿ ಯಶಿಕಾ ಆನಂದ್ ಮತ್ತು ವಲ್ಲಿಚೆಟ್ಟಿ ಭವಾನಿ ಅವರು ಇನ್ನಿಬ್ಬರು ಪುರುಷ ಸ್ನೇಹಿತರ ಜೊತೆ ಮಹಾಬಲಿಪುರಂನಿಂದ ಚೆನ್ನೈಗೆ ಮರಳುತ್ತಿದ್ದರು.
ಭವಾನಿ ಅವರು ಅಮೆರಿಕದಲ್ಲಿ ಸಾಫ್ಟ್ವೇರ್ ಕಂಪನಿ ಉದ್ಯೋಗಿ ಆಗಿದ್ದರು. ಈಸ್ಟ್ ಕೋಸ್ಟ್ ರೋಡ್ನಲ್ಲಿ ಶನಿವಾರ (ಜು.24) ರಾತ್ರಿ 11.45ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದಿದೆ.
ಕಾರು ಪಲ್ಟಿ ಆಗಿ ಎಲ್ಲರಿಗೂ ತೀವ್ರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ವಲ್ಲಿಚೆಟ್ಟಿ ಭವಾನಿ ಸ್ಥಳದಲ್ಲೇ ಮೃತಪಟ್ಟರು ಎಂಬ ಸುದ್ದಿ ತಿಳಿದು ಬಂದಿದೆ.
ಪ್ರಥಮ ಚಿಕಿತ್ಸೆ ಬಳಿಕ ಯಶಿಕಾ ಆನಂದ್ ಮತ್ತು ಸ್ನೇಹಿತರನ್ನು ಚೈನ್ನೈನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಅಪಘಾತ ಬಗ್ಗೆ ಮಹಾಬಲಿಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಅತಿ ವೇಗವಾಗಿ ಕಾರು ಚಾಲನೆ ಮಾಡಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಡ್ರಿಂಕ್ ಆ್ಯಂಡ್ ಡ್ರೈವ್ ಅನುಮಾನ ಕೂಡ ಮೂಡಿದೆ.
Post a Comment