ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಟಾಟಾ ಏಸ್ ಲಾರಿಗೆ ಡಿಕ್ಕಿ; ಇಬ್ಬರು ಸಾವು, ಹಲವರು ಗಂಭೀರ

ಟಾಟಾ ಏಸ್ ಲಾರಿಗೆ ಡಿಕ್ಕಿ; ಇಬ್ಬರು ಸಾವು, ಹಲವರು ಗಂಭೀರ

 


ಹಾಸನ : ಆದಿಚುಂಚನಗಿರಿಗೆ ತೆರಳಿ, ದೇವರ ದರ್ಶನ ಮುಗಿಸಿಕೊಂಡು ಹಿಂತಿರುಗುತ್ತಿದ್ದ ವೇಳೆ ಬೆಳ್ಳೂರು ಕ್ರಾಸ್ ಬಳಿ ಟಾಟಾ ಏಸ್  ಮತ್ತು ಲಾರಿ ನಡುವೆ ಡಿಕ್ಕಿಯಾಗಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕ ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.


ಮಂಡ್ಯದ ಕೆ ಆರ್ ಪೇಟೆ ತಾಲೂಕಿನ ಅಗ್ರಹಾರ ಬಾಚನಹಳ್ಳಿಯ ಜಯರಾಮೇಗೌಡ ಮತ್ತು ಅವರ ಕುಟುಂಬಸ್ಥರು ಆದಿಚುಂಚನಗಿರಿಗೆ ದೇವರ ದರ್ಶನಕ್ಕೆ ತೆರಳಿದ್ದರು.  


ದೇವರ ದರ್ಶನ ಮುಗಿಸಿಕೊಂಡು ಹಿಂತಿರುಗುವ  ಸಂದರ್ಭದಲ್ಲಿ ಟಾಟಾ ಏಸ್ ಹಾಸನ ಜಿಲ್ಲೆಯ ಬೆಳ್ಳೂರು ಕ್ರಾಸ್ ಬಳಿ ಲಾರಿಗೆ ಡಿಕ್ಕಿಯಾಗಿದೆ.


ಡಿಕ್ಕಿಯ ರಭಸಕ್ಕೆ ಟಾಟಾ ಏಸ್ ಮುಂಭಾಗ ನಜ್ಜುಗುಜ್ಜಾಗಿದ್ದು, ಮುಂದೆ ಕುಳಿತಿದ್ದ ಯೋಗೇಶ್(30) ಹಾಗೂ ಬೇಬಿ(18) ಸ್ಥಳದಲ್ಲೇ ಮೃತಪಟ್ಟಿದ್ದಾರೆ.  


ಚಾಲಕ ಸೇರಿದಂತೆ ಹಲವರ ಸ್ಥಿತಿ ಗಂಭೀರವಾಗಿದ್ದು, ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಅಪಘಾತ ದ ಬಗ್ಗೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


(ಉಪಯುಕ್ತ ನ್ಯೂಸ್)


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم