ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಪದಗ್ರಹಣ

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಪದಗ್ರಹಣ

 


ಬೆಂಗಳೂರು : ಇತ್ತೀಚೆಗೆ ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕಮಾಡಿ ರಾಷ್ಟ್ರಪತಿಗಳು ಆದೇಶಿಸಿದ್ದರು. ಇಂತಹ ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕಗೊಂಡಂತ ಥಾವರ್ ಚಂದ್ ಗೆಹ್ಲೋಟ್ ಅವರು, ಇಂದು ಬೆಳಿಗ್ಗೆ 10.30ಕ್ಕೆ ಪದಗ್ರಹಣ ಮಾಡಿದರು.


ಕರ್ನಾಟಕ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಂತ ತಾವರ್ ಚಂದ್ ಗೆಹ್ಲೋಟ್ ಅವರು, ಜುಲೈ.11ರಂದು ಬೆಳಿಗ್ಗೆ 10.30ಕ್ಕೆ ರಾಜಭವನದ ಗ್ಲಾಸ್ ಹೌಸ್ ನಲ್ಲಿ ನಿಗದಿ ಪಡಿಸಿರುವಂತ ಸರಳ ಸಮಾರಂಭದಲ್ಲಿ ಪದಗ್ರಹಣ ಮಾಡಿದರು.


ಕರ್ನಾಟಕದ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಅವರು ನೂತನ ರಾಜ್ಯಪಾಲರಿಗೆ ಪ್ರಮಾಣ ವಚನ ಬೋಧಿಸಿದರು.

Key words: Karnataka Governor, Thawar Chand Gehlot, ಕರ್ನಾಟಕ ರಾಜ್ಯಪಾಲರು, ತಾವರ್‌ ಚಂದ್ ಗೆಹ್ಲೋಟ್

(ಉಪಯುಕ್ತ ನ್ಯೂಸ್)


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 Comments

Post a Comment

Post a Comment (0)

Previous Post Next Post