ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮೂರಕ್ಕಿಂತ ಹೆಚ್ಚು ಹೆಣ್ಣು ಮಕ್ಕಳು ಹೊಂದಿದ್ದರೆ ಭಾಗ್ಯಲಕ್ಷ್ಮಿ ಬಾಂಡ್ ವಾಪಸ್

ಮೂರಕ್ಕಿಂತ ಹೆಚ್ಚು ಹೆಣ್ಣು ಮಕ್ಕಳು ಹೊಂದಿದ್ದರೆ ಭಾಗ್ಯಲಕ್ಷ್ಮಿ ಬಾಂಡ್ ವಾಪಸ್

 


ಬೆಂಗಳೂರು; ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೆಣ್ಣುಮಕ್ಕಳ ಶಿಕ್ಷಣ ಸೇರಿದಂತೆ ಅವರ ಅನುಕೂಲಕ್ಕಾಗಿ ಜಾರಿಗೆ ತಂದ ಮಹತ್ವಾಕಾಂಕ್ಷೆಯ ಭಾಗ್ಯಲಕ್ಷ್ಮಿ ಯೋಜನೆಯಡಿ ಸರ್ಕಾರ ಬಾಂಡ್ ಗಳನ್ನು ನೀಡಿದೆ.


ಮೂರಕ್ಕಿಂತ ಹೆಚ್ಚು ಹೆಣ್ಣು ಮಕ್ಕಳನ್ನು ಹೊಂದಿದವರಿಂದ ಭಾಗ್ಯಲಕ್ಷ್ಮಿ ಬಾಂಡ್ ಗಳನ್ನು ವಾಪಸ್ ಪಡೆಯಲು ತೀರ್ಮಾಣ ಮಾಡಿದೆ ಎಂದು ಹೇಳಲಾಗಿದೆ.  

2014 ರವರೆಗೆ ಬಾಂಡ್ ಪಡೆದುಕೊಂಡ ಫಲಾನುಭವಿಗಳ ಗುರುತಿಸಿ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ.


ಹೆಣ್ಣು ಮಕ್ಕಳಿಗೆ ಭಾಗ್ಯಲಕ್ಷ್ಮಿ ಬಾಂಡ್ ಮಾಡಿರುವ ಸಂದರ್ಭದಲ್ಲಿ ಮೂವರು ಮಕ್ಕಳು ಇದ್ದು, ನಂತರದಲ್ಲಿ ಹೆಚ್ಚಿನ ಮಕ್ಕಳನ್ನು ಹೊಂದಿದ ಕುಟುಂಬದವರಿಗೆ ಸಮಸ್ಯೆ ಎದುರಾಗಿದೆ.  


ಇದೀಗ ಮೂರಕ್ಕಿಂತ ಹೆಚ್ಚು ಮಕ್ಕಳಿರುವ ಫಲಾನುಭವಿಗಳನ್ನು ಗುರುತಿಸಿ ಬಾಂಡ್ ವಾಪಸ್ ಪಡೆಯಲು ಸರ್ಕಾರ ಸೂಚನೆ ನೀಡಿದ್ದು, ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗಿದೆ ಎಂಬ ಮಾಹಿತಿ ದೊರಕಿದೆ.


(ಉಪಯುಕ್ತ ನ್ಯೂಸ್)


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post