ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಇಂದು ಕೊನೆಗೊಂಡಿದ್ದು, ಒಎಂಆರ್ ಉತ್ತರ ಪತ್ರಿಕೆಗಳನ್ನು ಡಿಜಿಟಲ್ ಸ್ಕ್ಯಾನಿಂಗ್‍ಗೆ ಕಳುಹಿಸಿ ನಂತರ ಮೌಲ್ಯಮಾಪನ ಮಾಡಿ ಆಗಸ್ಟ್ 10ರೊಳಗೆ ಫಲಿತಾಂಶ ಪ್ರಕಟ ಮಾಡಲಿದ್ದೇವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಸುರೇಶ್ ಕುಮಾರ್ ರಾಜ್ಯದಲ್ಲೆಡೆ ಮಳೆ ಅಬ್ಬರ ಜೋರಾಗಿದ್ದು, ಈ ವರ್ಷಧಾರೆ ಸಾರಿಗೆ ಕಾರಣದಿಂದ ಯಾವುದೇ ಮಕ್ಕಳು ಗೈರು ಆಗದೇ ಶೇ 99.65ರಷ್ಟು ಹಾಜರಾತಿಯೊಂದಿಗೆ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ತಿಳಿಸಿದರು.
ಅಬ್ಬರದ ಮಳೆಯ ನಡುವೆಯೂ ಯಶಸ್ವಿಯಾಗಿ ಪರೀಕ್ಷೆ ನಡೆದಿದೆ, ಕಳೆದ ಬಾರಿಗಿಂತ ಈ ಬಾರಿ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚು ಇದೆ. ಮಕ್ಕಳು ಕೂಡ ಸಂತೋಷ ಮತ್ತು ನಿರಾಳತೆಯೊಂದಿಗೆ ಪರೀಕ್ಷೆ ಬರೆದು ಯಶಸ್ವಿಯಾಗಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಕೋವಿಡ್ ಕೇರ್ ಸೆಂಟರ್ನಿಂದ 67 ಮಕ್ಕಳು ಪರೀಕ್ಷೆ ಬರೆದಿದ್ದು, ಕೋಲಾರ ಮತ್ತು ಹಾಸನದಲ್ಲಿ ತಲಾ ಒಬ್ಬ ಪಾಸಿಟಿವ್ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾದರು. ಐಸೋಲೇಷನ್ ಕೊಠಡಿಯಲ್ಲಿ 152 ಮಕ್ಕಳು ಪರೀಕ್ಷೆ ಬರೆದಿದ್ದಾರೆ ಎಂದು ಮಾಹಿತಿ ನೀಡಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment