ಉಡುಪಿ: ಎಸ್.ಎಂ. ಎಸ್. ಪಿ ಸಭಾ ಮತ್ತು ಪರ್ಯಾಯ ಶ್ರೀ ಅದಮಾರು ಮಠ- ಪರ್ಯಾಯ ಶ್ರೀಕೃಷ್ಣ ಮಠ ಉಡುಪಿ ಇವರ ಆಶ್ರಯದಲ್ಲಿ, ಶ್ರೀಮನ್ಮಧ್ವಸಿದ್ಧಾಂತ ಪ್ರಬೋಧಕ ಸಂಸ್ಕೃತ ಅಧ್ಯಯನ ಕೇಂದ್ರ ಉಡುಪಿ ಇಲ್ಲಿ ಅಧ್ಯಯನ ಮಾಡಿ, ಅಲಂಕಾರಶಾಸ್ತ್ರ ಪ್ರಾಧ್ಯಾಪಕರಾಗಿ, ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿರುವ ಪ್ರೊ. ಎನ್. ಲಕ್ಷ್ಮೀನಾರಾಯಣ ಭಟ್ ಅವರಿಗೆ ಸಂಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವು ಜುಲೈ 24, ಶನಿವಾರದ ದಿನ ಅಪರಾಹ್ನ 4 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಶ್ರೀಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪರ್ಯಾಯ ಶ್ರೀ ಅದಮಾರು ಮಠ, ಶ್ರೀಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಅದಮಾರು ಮಠ, ಶ್ರೀಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಪಲಿಮಾರು ಮಠ, ಪರಮಪೂಜ್ಯರುಗಳ ದಿವ್ಯ ಉಪಸ್ಥಿತಿ ಇರಲಿದೆ.
ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಶ್ರೀ ಹರಿನಾರಾಯಣದಾಸ ಅಸ್ರಣ್ಣ, ಮತ್ತು ಪ್ರೊ. ಕೆ. ಇ. ದೇವನಾಥನ್ ಕುಲಪತಿಗಳು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಬೆಂಗಳೂರು, ಇವರು ಮುಖ್ಯ ಅಭ್ಯಾಗತರಾಗಿರುವರು. ಆಗಮ ವಿದ್ವಾಂಸರಾದ ಪಂಜ ಭಾಸ್ಕರ ಭಟ್ ಅವರು ಅಭಿನಂದನಾ ಭಾಷಣ ಮಾಡಲಿರುವರು ಎಂದು ಕಾರ್ಯಕ್ರಮ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿರುವರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment