ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ ಉಡುಪಿ ಶಾಖೆಯ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ಗುರುವಾರ ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಲಾಗಿತ್ತು.
ಹಿರಿಯ ವರದಿಗಾರರಾದ ಸುಬ್ರಹ್ಮಣ್ಯ ಜಿ.ಕುರ್ಯ ಹಾಗೂ ಶಶಿಧರ ಮಾಸ್ತಿಬೈಲು ಅವರನ್ನು ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ಮುಖ್ಯಸ್ಥ ಹಫೀಝ್ ರೆಹಮಾನ್ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ವಕೀಲ ಹಾಗೂ ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ವಿವೇಕಾನಂದ ಪನಿಯಾಲ, ವಾರ್ತಾಧಿಕಾರಿ ಎಂ.ಮಂಜುನಾಥ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಮಲಬಾರ್ ಗೋಲ್ಡ್ಸ್‌ನ ಜಿಆರ್‌ಎಂ ರಾಘವೇಂದ್ರ ನಾಯಕ್, ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ ಮೊದಲಾದವರು ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment